ಪುತ್ತೂರು: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆಯೊಂದರ ಬೀಗ ಮುರಿದು ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಬಾಳ್ತಿಲ ಗ್ರಾಮದ ಸತೀಶ್ ಶೆಣೈ (57) ಅವರು 2026ರ ಫೆಬ್ರವರಿ 4ರಂದು ಸಂಜೆ ಮನೆಗೆ ಬೀಗ ಹಾಕಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ರಾತ್ರಿ ಮನೆಗೆ ಮರಳಿದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿದೆ.
ತಕ್ಷಣ ಮನೆಯೊಳಗೆ ಪರಿಶೀಲಿಸಿದಾಗ ಕೊಠಡಿಯ ಲಾಕರ್ನಲ್ಲಿದ್ದ ಸುಮಾರು ₹8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹5 ಸಾವಿರ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಪಾ (21) ಎಂಬಾತ ನವೆಂಬರ್ 11ರಂದು ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ನಂತರ ಪ್ರಕರಣದ ತನಿಖೆಗಾಗಿ ಪೊಲೀಸರು ಆರೋಪಿಯನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಪ್ರತಿಕ್ರಿಯೆಗಳು